ಡಾ|| ಎಂ.ಎಸ್. ಮಧುರಕರ ಅವರಿಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ

ಶ್ರೀ ರಂಭಾಪುರಿ ಪೀಠ (ಬಾಳೆಹೊನ್ನೂರು) ಫೆ. 25 – ಪ್ರತಿ ವರುಷ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದಂದು ನೀಡುತ್ತಾ ಬಂದಿರುವ ‘ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ’ಯನ್ನು ಈ ವರ್ಷ ಬಾಗಲಕೋಟೆಯ ಅಂಗವಿಕಲರಾದ ಡಾ|| ಎಸ್. ಮಹಜಬೀನ ಮಧುರಕರ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಪ್ರಕಟಿಸಿದರು.

ಶ್ರೀ ಪೀಠದಲ್ಲಿ ಜರುಗಿದ ಪೌರ್ಣಿಮೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಪ್ರಥಮ ಪ್ರಕಟಣೆ ಬಿಡುಗಡೆ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಜಗದ್ಗುರುಗಳು ಆಶೀರ್ವಚನ ನೀಡಿದರು.

ಡಾ|| ಮಹಾಜಬೀನ ಮಧುರಕರ ಅವರು ಅಂಗವಿಕಲರಿಗಾಗಿ ವಿಶೇಷ ಸಾಮಾಜಿಕ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ, ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಮಧುರಕರ ಅವರು ಚರ್ಮ ಚಿಕಿತ್ಸೆಗೆ ಸಂಬಂಧಪಟ್ಟಂತೆ ವಿಶೇಷ ಪರಿಣಿತಿ ಹೊಂದಿದ್ದು ಎಂಬಿಬಿಎಸ್ ಪರೀಕ್ಷೆಯಲ್ಲಿ ಚಿನ್ನದ ಪದಕ ಪಡೆದ ಅವರು ವೈದ್ಯಕೀಯ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ರಾಜ್ಯ ಸರ್ಕಾರ ಅಂಗವಿಕಲರ ದಿನಾಚರಣೆ ಅಂಗವಾಗಿ ‘ರಾಜ್ಯ ಪ್ರಶಸ್ತಿ’ ನೀಡಿ ಗೌರವಿಸಿದೆ. ಬಾಗಲಕೋಟೆಯಲ್ಲಿ ವಾಸವಿ ಸ್ಕಿನ್ ಕೇರ್ ಕ್ಲಿನಿಕ್ ಹೆಸರಿನಲ್ಲಿ ಪ್ರಾದೇಶಿಕ ಚರ್ಮರೋಗ ಕೇಂದ್ರ ನಡೆಸುತ್ತಿದ್ದಾರೆ. ಪ್ರಶಸ್ತಿಯು ಸ್ಮರಣಿಕೆ, ವಿಶೇಷ ಪ್ರಶಸ್ತಿ ಹಾಗೂ 1 ಲಕ್ಷ ರೂ. ಮೊತ್ತವನ್ನು ಒಳಗೊಂಡಿದೆ. ಮಾರ್ಚ್ 22ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಜಗದ್ಗುರುಗಳು ವಿವರಿಸಿದರು.

ಸಮಾರಂಭದಲ್ಲಿ ಬೇರುಗಂಡಿ ಬೃಹನ್ಮಠದ ಶ್ರೇಣುಕ ಮಹಾಂತ ಶಿವಾಚಾರ್ಯ ಸ್ವಾಮಿಗಳು, ಚಿಕ್ಕಮಗಳೂರಿನ ಉಪ್ಪಳ್ಳಿ ಬಸವರಾಜ್, ದೇವರಾಜ್, ತರೀಕೆರೆ ಗ್ಯಾಸ್‌, ರಾಜಣ್ಣ, ಯೋಗೀಶ, ಶಿವಮೊಗ್ಗದ ಓಂಕಾರಪ್ಪ, ನ್ಯಾಮತಿ ಬಸವರಾಜ್, ನೆರಳೆಕೆರೆ ಬಿ.ಶಿವಮೂರ್ತಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

error: Content is protected !!