ರೈತ ಸಂಘದಿಂದ ಇಂದು ಡಿಸಿ ಕಚೇರಿ ಮುಂದೆ ಪ್ರತಿಭಟನೆ

ದಾವಣಗೆರೆ, ಫೆ.27- ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ ಬಣ)ದಿಂದ ನಾಳೆ ದಿನಾಂಕ 28ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಗುಮ್ಮನೂರು ಬಸವರಾಜ್ ತಿಳಿಸಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ದೆಹಲಿ ಚಳವಳಿಯಲ್ಲಿ ಮೃತಪಟ್ಟ ರೈತ ಶುಭಕರನ್ ಸಿಂಗ್ ಕುಟುಂಬಕ್ಕೆ ಸರ್ಕಾರ ಸಾಂತ್ವನ ಹೇಳಬೇಕು. ರೈತರ ಸಾಲ ಮನ್ನಾ ಮಾಡಬೇಕು.  ಕೇಂದ್ರ ಜಾರಿಗೆ ತಂದಿರುವ 3 ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು. 

ಬಲವಂತ ಸಾಲ ವಸೂಲು ಕೈ ಬಿಡಬೇಕು. ಗ್ರಾಮ ಪಂಚಾಯ್ತಿಗೊಂದು ಗೋಶಾಲೆ ತೆರಯ ಬೇಕು. ರೈತರ ಪಂಪ್‌ಸೆಟ್‌ಗಳಿಗೆ ನಿರಂತರ 7 ಗಂಟೆ ವಿದ್ಯುತ್ ನೀಡಬೇಕು. ಪ್ರತಿ ಹಳ್ಳಿಯಲ್ಲಿ ಬಸ್ ತಂಗುದಾಣ ನಿರ್ಮಿಸಬೇಕು ಎಂದು ಆಗ್ರಹಿಸಿ ಪ್ರತಿಭಟಿಸಲಾಗುವುದು ಎಂದರು. ಪತ್ರಿಕಾಗೋಷ್ಠಿ ಯಲ್ಲಿ ಚಿಕ್ಕಬೂದಿಹಾಳ್ ಭಗತ್ ಸಿಂಗ್, ಕೆಂಚವ್ವ ನಹಳ್ಳಿ ಹನುಮಂತಪ್ಪ, ಕಿತ್ತೂರು ಹನುಮಂತಪ್ಪ, ಚಿಕ್ಕತೊಗಲೇರಿ ಮಲ್ಲಿಕಾರ್ಜುನ್, ಸುನಿಲ್ ಇತರರಿದ್ದರು.

error: Content is protected !!