ಜಿಲ್ಲಾ ವಕೀಲರ ಸಂಘದಿಂದ ಇಂದು ಮಧ್ಯಾಹ್ನ 2.30ಕ್ಕೆ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಭೂಮಾಪನ ಮತ್ತು ಭೂ ದಾಖಲಾತಿಗಳು ಕುರಿತು ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಉದ್ಘಾಟನೆಯನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ರಾಜೇಶ್ವರಿ ಎನ್.ಹೆಗಡೆ ಅವರು ನೆರವೇರಿಸುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್ಕುಮಾರ್ ವಹಿಸುವರು. ದಾವಣಗೆರೆ ಭೂ ಮಾಪನಾ ಇಲಾಖೆ ನಿವೃತ್ತ ಪರ್ಯಾವೀಕ್ಷಕರಾದ ಡಾ. ರಂಗನಾಥ್ ಎನ್. ಉಪನ್ಯಾಸ ನೀಡುವರು.
ದಾವಣಗೆರೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರವೀಣ ಕುಮಾರ್ ಆರ್.ಎನ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ. ಶಿವಪ್ಪ ಗಂಗಪ್ಪ ಸಲಗೆರೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಇವರುಗಳು ಮುಖ್ಯ ಅತಿಥಿಗಳಾಗಿ ಆಗಮಿಸುವರು ಎಂದು ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ಜಿ.ಕೆ. ಬಸವರಾಜ್ ಗೋಪನಾಳ್, ಕಾರ್ಯದರ್ಶಿ ಎನ್. ಬಸವರಾಜ್, ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್ ತಿಳಿಸಿದ್ದಾರೆ.