ದಾವಣಗೆರೆ, ಮಾ. 1- ನಗರದ ಎ.ವಿ.ಕೆ. ಕಾಲೇಜು ರಸ್ತೆಯಲ್ಲಿ ನಾಡಿದ್ದು ದಿನಾಂಕ 3 ರ ಭಾನುವಾರ ಮೂರನೇ ವರ್ಷದ ದಾವಣಗೆರೆ ಚಿತ್ರಸಂತೆ-2024 ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಚಿತ್ರಕಲಾ ಪರಿಷತ್ ಕಾರ್ಯದರ್ಶಿ ಡಿ. ಶೇಷಾಚಲ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 10.30 ಕ್ಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಚಿತ್ರಸಂತೆಗೆ ಚಾಲನೆ ನೀಡುವರು. ಪರಿಷತ್ ಅಧ್ಯಕ್ಷ ಡಿ.ಸಿ. ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದಾರೆ.
ಶಾಸಕರುಗಳಾದ ಶಾಮನೂರು ಶಿವಶಂಕರಪ್ಪ, ಡಿ.ಜಿ.ಶಾಂತನಗೌಡ, ಕೆ.ಎಸ್. ಬಸವಂತಪ್ಪ, ಬಿ. ದೇವೇಂದ್ರಪ್ಪ, ಮೇಯರ್ ವಿನಾಯಕ ಪೈಲ್ವಾನ್, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್, ಎಸ್ಪಿ ಉಮಾ ಪ್ರಶಾಂತ್, ಪಾಲಿಕೆ ಆಯುಕ್ತರಾದ ರೇಣುಕಾ ಮತ್ತಿತರರು ಭಾಗವಹಿಸಲಿದ್ದಾರೆ.
ಅದೇ ದಿನ ಸಂಜೆ 5.15 ಕ್ಕೆ ಚಿತ್ರಸಂತೆ ಸಮಾರೋಪ ಸಮಾರಂಭ ನಡೆಯಲಿದ್ದು, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಬಿ.ಪಿ. ಹರೀಶ್, ಬಸವರಾಜ ಶಿವಗಂಗಾ, ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್, ಮಾಜಿ ಮೇಯರ್ ಬಿ.ಜಿ. ಅಜಯ್ ಕುಮಾರ್, ಜಿ.ಪಂ. ಸಿಇಓ ಡಾ. ಸುರೇಶ ಬಿ. ಇಟ್ನಾಳ್ ಮತ್ತಿತರರು ಭಾಗಹಿಸಲಿದ್ದಾರೆ.
ಬೆಳಿಗ್ಗೆ 8ರಿಂದ ಸಂಜೆ 7 ರವರೆಗೆ ಚಿತ್ರಸಂತೆ ನಡೆಯಲಿದೆ. ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕದ ವಿವಿಧ ಭಾಗಗಳಿಂದ ಸುಮಾರು 150 ಕ್ಕೂ ಹೆಚ್ಚು ಚಿತ್ರ ಕಲಾವಿದರು ಭಾಗವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಪರಿಷತ್ ಪದಾಧಿಕಾರಿಗಳಾದ ಡಿ.ಸಿ. ಶ್ರೀನಿವಾಸ್, ಸದಾನಂದ ಹೆಗಡೆ, ಶಾಂತಯ್ಯ ಪರಡಿಮಠ, ಎಂ. ಅಶೋಕ್, ಎಂ.ಎಸ್. ಚೇತನ್, ಎ. ಶಿವಕುಮಾರ್ ಉಪಸ್ಥಿತರಿದ್ದರು.