ಆದಿ ಕರ್ನಾಟಕ ವಿದ್ಯಾಭಿವೃದ್ಧಿ ಸಂಘದ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ, ಮಾ.1- ನಗರದ   ಆದಿ ಕರ್ನಾಟಕ ವಿದ್ಯಾಭಿವೃದ್ಧಿ  ಸಂಘದ ಸಾಮಾನ್ಯ ಸದಸ್ಯತ್ವ ಪಡೆಯಲು ಅರ್ಜಿ ಸಲ್ಲಿಸುವ ಅವಧಿಯನ್ನು 30 ದಿನ ಮುಂದುವರೆಸಲಾಗಿದೆ. ಸಂಸ್ಥೆಯ ಅಡಿಯಲ್ಲಿ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಗಳು, ಪದವಿಪೂರ್ವ ಕಾಲೇಜು, ಹಾಸ್ಟೆಲ್ ಪ್ಯಾರಾ ಮೆಡಿಕಲ್ ಕಾಲೇಜು ನಡೆಯುತ್ತಿದ್ದು, ಇನ್ನು ಹೆಚ್ಚಿನ ಅಭಿವೃದ್ಧಿಗಾಗಿ ಹೊಸದಾಗಿ 100 ಜನ ಸಾಮಾನ್ಯ ಸದಸ್ಯರನ್ನು ಆಯ್ಕೆ ಮಾಡಲು ಆಡಳಿತ ಮಂಡಳಿ ತೀರ್ಮಾನಿಸಿದೆ.  

ಸಾಮಾನ್ಯ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸುವವರು ದಾವಣಗೆರೆ ಜಿಲ್ಲೆ ವ್ಯಾಪ್ತಿಗೆ ಸೇರಿದವರಾಗಿರಬೇಕು. ಒಂದು ತಾಲ್ಲೂಕಿನ 10 ಜನ ಸದಸ್ಯರಂತೆ (ಹರಿಹರ, ಹೊನ್ನಾಳಿ, ಚನ್ನಗಿರಿ, ಮಾಯಕೊಂಡ, ಜಗಳೂರು) ಉಳಿದ ಸದಸ್ಯತ್ವ ದಾವಣಗೆರೆ ದಕ್ಷಿಣ ಹಾಗೂ ದಾವಣಗೆರೆ ಉತ್ತರಕ್ಕೆ
ಕೊಡಲಾಗುವುದು ಎಂದು ಅಧ್ಯಕ್ಷ ಎಂ. ಹನುಮಂತಪ್ಪ  ಮತ್ತು ಕಾರ್ಯದರ್ಶಿ  ಬಿ.ಹೆಚ್‌. ವೀರಭದ್ರಪ್ಪ ತಿಳಿಸಿದ್ದಾರೆ.

error: Content is protected !!