ಚಿತ್ರದುರ್ಗ, ಮಾ. 1 – ಮುರುಘಾ ಮಠದ ಟ್ರಸ್ಟ್ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಸಮಿತಿಗೆ ಅಧ್ಯ ಕ್ಷರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಸಿ.ಶಿವಯೋಗಿ ಕಳಸದ ಅವರನ್ನು ನೇಮಿಸಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ.
ಪೋಕ್ಸೋ ಕಾಯ್ದೆಯಡಿ ಆರೋಪಿಯಾಗಿರುವ ಶಿವಮೂರ್ತಿ ಶರಣರು ಮಠದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಹಾಗೂ ಆಡಳಿತದ ಭಾಗವಾಗಿರಬಾರದು ಎಂದು ಸುಪ್ರೀಂ ಕೋರ್ಟ್ ತಿಳಿಸಿತ್ತು. ಆಡಳಿತ ನೋಡಿಕೊಳ್ಳಲು ಮೂರು ದಿನಗಳಲ್ಲಿ ಸಮಿತಿ ರಚಿಸಬೇಕು ಎಂದು ಫೆ.27ರಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.