ಮುರುಘಾ ಮಠ ಆಡಳಿತ ಸಮಿತಿ ಅಧ್ಯಕ್ಷರಾಗಿ ಕಳಸದ ನೇಮಕ

ಮುರುಘಾ ಮಠ ಆಡಳಿತ ಸಮಿತಿ ಅಧ್ಯಕ್ಷರಾಗಿ ಕಳಸದ ನೇಮಕ

ಚಿತ್ರದುರ್ಗ, ಮಾ. 1 – ಮುರುಘಾ ಮಠದ ಟ್ರಸ್ಟ್‌ ಮತ್ತು ಎಸ್‌.ಜೆ.ಎಂ. ವಿದ್ಯಾಪೀಠದ ಆಡಳಿತ ಸಮಿತಿಗೆ ಅಧ್ಯ ಕ್ಷರನ್ನಾಗಿ ನಿವೃತ್ತ ಐಎಎಸ್‌ ಅಧಿಕಾರಿ ಸಿ.ಶಿವಯೋಗಿ ಕಳಸದ ಅವರನ್ನು ನೇಮಿಸಲಾಗಿದೆ. ಸುಪ್ರೀಂ ಕೋರ್ಟ್‌ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ.

ಪೋಕ್ಸೋ ಕಾಯ್ದೆಯಡಿ ಆರೋಪಿಯಾಗಿರುವ ಶಿವಮೂರ್ತಿ ಶರಣರು ಮಠದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಹಾಗೂ ಆಡಳಿತದ ಭಾಗವಾಗಿರಬಾರದು ಎಂದು ಸುಪ್ರೀಂ ಕೋರ್ಟ್‌ ತಿಳಿಸಿತ್ತು. ಆಡಳಿತ ನೋಡಿಕೊಳ್ಳಲು ಮೂರು ದಿನಗಳಲ್ಲಿ ಸಮಿತಿ ರಚಿಸಬೇಕು ಎಂದು ಫೆ.27ರಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

error: Content is protected !!