ಚಿತ್ರದುರ್ಗ, ಮಾ.3- ಸಮೀಪದ ಶಿಬಾರದಲ್ಲಿ ಇದೇ ದಿನಾಂಕ 9ರಂದು ಸಂಜೆ 5.30 ಗಂಟೆಗೆ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಶ್ರೀ ಜಗದ್ಗುರು ಗುರುಪಾದ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಹಾಗು ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಗಳ ಸ್ಮರಣಾರ್ಥವಾಗಿ 69ನೇ ವರ್ಷದ ರಥೋತ್ಸವ ಜರುಗಲಿದೆ.
ಜಾತ್ರಾ ಮಹೋತ್ಸವದ ಅಂಗವಾಗಿ ಇದೇ ದಿನಾಂಕ 10 ರಿಂದ 23 ರವರೆಗೆ ದನಗಳ ಜಾತ್ರೆ ನಡೆಯಲಿದ್ದು, ರಾಜ್ಯ ಮತ್ತು ಹೊರರಾಜ್ಯ ಗಳ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ವಿವಿಧ ತಳಿಗಳ ರಾಸುಗಳು ಭಾಗವಹಿಸಲಿವೆ ಎಂದು ಮಠದ ಪ್ರಕಟಣೆ ತಿಳಿಸಿದೆ.