ಬಿ.ಇ.ಎ. ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಇಂದು ಬೆಳಿಗ್ಗೆ 11 ಗಂಟೆಗೆ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ದಾವಣಗೆರೆ ವಿವಿ ಪ್ರಭಾರಿ ಕುಲಸಚಿವ (ಆಡಳಿತ) ಪ್ರೊ. ವೆಂಕಟರಾವ್ ಎಂ. ಪಲಾಟೆ ಕಾರ್ಯಕ್ರಮ ಉದ್ಘಾಟಿಸುವರು. ಪ್ರಾಚಾರ್ಯರಾದ ಡಾ. ಎ.ಜೆ. ನೀತಾ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಆತಿಥಿಗಳಾಗಿ ಮಹಾವಿದ್ಯಾಲಯದ ಆಡಳಿತಾಧಿಕಾರಿ ಪ್ರೊ. ವೈ. ವೃಷಭೇಂದ್ರಪ್ಪ, ಹಿರಿಯ ಉಪನ್ಯಾಸಕಿ ಆರ್.ಎಲ್. ಶೈಲಜಾ, ಐಕ್ಯೂಎಸಿ ಘಟಕದ ಸಂಯೋಜಕ ಕೆ. ಮುರುಗೇಶಿ ಭಾಗವಹಿಸಲಿದ್ದಾರೆ.
January 11, 2025