ದಾವಣಗೆರೆ, ಮಾ.6- ರಾಜನಹಳ್ಳಿ ಲಕ್ಷ್ಮಣ ಶೆಟ್ಟಿ ಕಾನೂನು ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಕಟ್ಟಡ ಉದ್ಘಾಟನಾ ಸಮಾರಂಭ ನಾಳೆ 7ರಂದು ನಡೆಯಲಿದೆ ಎಂದು ಆರ್.ಎಲ್. ಕಾನೂನು ಕಾಲೇಜು ಪ್ರಾಂಶುಪಾಲ ಡಾ.ಜಿ.ಎಸ್. ಯತೀಶ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಡಾ.ಶಿವರಾಜ ವಿ.ಪಾಟೀಲ್ ಅವರು ಮಧ್ಯಾಹ್ನ 2.30ಕ್ಕೆ ಸಮಾರಂಭ ಉದ್ಘಾಟಿಸಲಿದ್ದಾರೆ. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಶಾಮನೂರು ಶಿವಶಂಕರಪ್ಪ ಉಪಸ್ಥಿತರಿರಲಿ ದ್ದಾರೆ. ಮುಖ್ಯ ಅತಿಥಿಗಳಾಗಿ ಕಾಲೇಜಿನ ಆಡಳಿತ ಸಮಿತಿ ಅಧ್ಯಕ್ಷ ಡಾ.ಆರ್.ಎಲ್. ಉಮಾಶಂಕರ್, ಬಾಪೂಜಿ ವಿದ್ಯಾಸಂಸ್ಥೆ ನಿರ್ದೇಶಕ ಡಾ.ಎಂ.ಜಿ. ಈಶ್ವರಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
1968ರಲ್ಲಿ ಆರಂಭವಾಗಿ 50 ವರ್ಷ ಪೂರೈಸಿದೆ. ಇದರ ಸವಿನೆನಪಿಗಾಗಿ ಹಾಗೂ ಕಾನೂನು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರಾಶಸ್ಥ್ಯ ಇರುವುದನ್ನು ಮನಗಂಡು ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಹೆಚ್ಚುವರಿ ತರಗತಿಗಳನ್ನು ಪ್ರಾರಂಭಿಸಲು 1.50 ಕೋಟಿ ರೂ. ವೆಚ್ಚದ 6 ಕೊಠಡಿಗಳ ಹೊಸ ಕಟ್ಟಡ ನಿರ್ಮಿಸಿರುವುದಾಗಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲ ಡಾ.ಸೋಮಶೇಖರ್, ಬಿ.ಪಿ. ಬಸವನಗೌಡ, ಲಿಂಗರಾಜ್ ಉಪಸ್ಥಿತರಿದ್ದರು.