ಬಾಪೂಜಿ ಮಕ್ಕಳ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಇಂದು ಸಂಜೆ 4 ಗಂಟೆಗೆ ಆಸ್ಪತ್ರೆಯಲ್ಲಿ ನವೀಕರಣಗೊಂಡ ಅತ್ಯಾಧುನಿಕ ಶಸ್ತ್ರ ಚಿಕಿತ್ಸಾ ಕೇಂದ್ರ, ನವಜಾತ ಶಿಶುಗಳ ಆರೈಕೆ ಕೇಂದ್ರ ಮತ್ತು ಎದೆ ಹಾಲಿನ ಭಂಡಾರದ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ತರಳಬಾಳು ಜಗದ್ಗುರು ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಹಿರಿಯ ಶಾಸಕರೂ ಆದ ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಶಾಮನೂರು ಶಿವಶಂಕರಪ್ಪ ಆಗಮಿಸುವರು. ಬಾಪೂಜಿ ಮಕ್ಕಳ ಆಸ್ಪತ್ರೆ, ಮತ್ತು ಸಂಶೋಧನಾ ಕೇಂದ್ರದ ಛೇರ್ಮನ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಬಾಪೂಜಿ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಎ.ಎಸ್.ವೀರಣ್ಣ, ಎ.ಎಸ್.ನಿರಂಜನ್, ಶ್ರೀಮತಿ ಕಿರುವಾಡಿ ಗಿರಿಜಮ್ಮ, ಸಂಪನ್ನ ಮುತಾಲಿಕ್ ಆಗಮಿಸಲಿದ್ದಾರೆ ಎಂದು ಬಾಪೂಜಿ ಮಕ್ಕಳ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಜಿ.ಗುರುಪ್ರಸಾದ್ ತಿಳಿಸಿದ್ದಾರೆ.