ಕನ್ನಿಕಾಪರಮೇಶ್ವರಿ ದೇವಸ್ಥಾನ ರಸ್ತೆಯಲ್ಲಿರುವ ಶ್ರೀ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಇಂದು ಮತ್ತು ನಾಳೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇಂದು ಬೆಳಿಗ್ಗೆ ಪೂಜೆ, ಸಂಜೆ 8.30 ರಿಂದ ಮಹಾಪೂಜೆ, ಜಾಗರಣೆ, ಪಳಾರದ ವ್ಯವಸ್ಥೆ ಹಾಗೂ ರಾತ್ರಿ 10.30 ರಿಂದ ಮನರಂಜನಾ ಕಾರ್ಯಕ್ರಮ ಏರ್ಪಡಿಸಲಾಗಿದೆ.
ನಾಳೆ ಶನಿವಾರ ಬೆಳಿಗ್ಗೆ 9 ಕ್ಕೆ ಕುಲದೇವರಾದ ಶ್ರೀ ಮಾರ್ಕಂಡೇಶ್ವರಸ್ವಾಮಿಯ ಉತ್ಸವ ನಡೆಯಲಿದ್ದು, ಮಧ್ಯಾಹ್ನ 12.30 ಕ್ಕೆ ಶ್ರೀ ಪ್ರಭುಲಿಂಗಸ್ವಾಮಿಗಳವರಿಂದ ಆಶೀರ್ವಚನ ನಡೆಯಲಿದೆ. ಮಧ್ಯಾಹ್ನ 1.30 ಕ್ಕೆ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಶ್ರೀ ಮಾರ್ಕಂಡೇಶ್ವರ ಪದ್ಮಶಾಲಿ ಸಮಾಜ ಸೇವಾ ಸಂಘದ ಅಧ್ಯಕ್ಷ ಪಿ.ಜೆ.ನಾಗರಾಜ್ ತಿಳಿಸಿದ್ದಾರೆ.