ನಗರದಲ್ಲಿ ಇಂದು ಬಿಜೆಪಿ ಪರಿಶಿಷ್ಟ ಪಂಗಡಗಳ ಮುನ್ನಡೆ ಸಮಾವೇಶ

ದಾವಣಗೆರೆ, ಮಾ. 10-  ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾ ವತಿಯಿಂದ  ನಾಳೆ ದಿನಾಂಕ 11 ರಂದು ಬೆಳಿಗ್ಗೆ 11 ಗಂಟೆಗೆ ವಿನೋಬನಗರದ ದಾವಣಗೆರೆ-ಹರಿಹರ ಅರ್ಬನ್ ಬ್ಯಾಂಕ್ ಸಮುದಾಯ ಭವನದಲ್ಲಿ ಪರಿಶಿಷ್ಟ ಪಂಗಡಗಳ ಮುನ್ನಡೆ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದ್ದು ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಸುದ್ದಿಗೋಷ್ಠಿಯಲ್ಲಿ  ತಿಳಿಸಿದರು.

ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭಾರಿ ವಿ. ಸುನಿಲ್ ಕುಮಾರ್, ಸಂಸದ ಡಾ.ಜಿ.ಎಂ. ಸಿದ್ದೇಶ್ವರ, ಮಾಜಿ ಸಚಿವರಾದ ಶ್ರೀರಾಮುಲು, ರಾಜುಗೌಡ, ಎಸ್.ಎ. ರವೀಂದ್ರನಾಥ್, ಎಂ.ಪಿ. ರೇಣುಕಾಚಾರ್ಯ, ಶಾಸಕ ಬಿ.ಪಿ. ಹರೀಶ್, ಮಾಜಿ ಶಾಸಕರಾದ ಎಸ್.ವಿ. ರಾಮಚಂದ್ರ, ಪ್ರೊ. ಎನ್. ಲಿಂಗಣ್ಣ, ಎಂ. ಬಸವರಾಜನಾಯ್ಕ, ಮಾಡಾಳು ವಿರೂಪಾಕ್ಷಪ್ಪ, ಟಿ. ಗುರುಸಿದ್ಧನಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಎಸ್ಟಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಬೆಳ್ಳಿ ಗಂಗಾಧರ, ಮಹಾಂತೇಶ್ ನಾಯಕ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್, ಬಿಜೆಪಿ ಮುಖಂಡ ಶಿವಕುಮಾರ್, ಮಾಜಿ ಮೇಯರ್ ಬಿ.ಜಿ. ಅಜಯ್ ಕುಮಾರ್, ಯುವ ಮುಖಂಡ ಮಾಡಾಳು ಮಲ್ಲಿಕಾರ್ಜುನ್, ಗುಮ್ಮನೂರು ಶ್ರೀನಿವಾಸ್, ಹೆಚ್.ಬಿ. ರುದ್ರೇಶ್ ಭಾಗವಹಿಸಲಿದ್ದು, ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಕೃಷ್ಣಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆಂದು ಮಾಹಿತಿ ನೀಡಿದರು

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಎಸ್ಟಿ ಮೋರ್ಚಾ ಪದಾಧಿಕಾರಿಗಳಾದ ಕೆ.ಎಸ್. ಕೃಷ್ಣಕುಮಾರ್, ಗುಮ್ಮನೂರು ಶ್ರೀನಿವಾಸ್, ಹೆಚ್.ಬಿ. ದುರುಗೇಶ್, ಮಾರುತಿ, ಪಾಪಲಿಂಗಪ್ಪ, ರಮೇಶ್, ಓಂಕಾರಪ್ಪ ಮತ್ತಿತರರು ಉಪಸ್ಥಿತರಿದ್ದರು. 

error: Content is protected !!