ದಾವಣಗೆರೆ ವಿಶ್ವವಿದ್ಯಾನಿಲಯದ 11ನೇ ಘಟಿಕೋತ್ಸವವು ಇಂದು ಬೆಳಿಗ್ಗೆ 11 ಗಂಟೆಗೆ ತೋಳಹುಣಸೆಯಲ್ಲಿನ ಜ್ಞಾನಸೌಧ ಶಿವಗಂಗೋತ್ರಿ ಆವರಣದಲ್ಲಿ ನಡೆಯಲಿದೆ.
ರಾಜ್ಯಪಾಲರು ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್‍ಚಂದ್ ಗೆಹ್ಲೋಟ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಉನ್ನತ ಶಿಕ್ಷಣ ಸಚಿವರು ಹಾಗೂ ವಿಶ್ವವಿದ್ಯಾನಿಲಯದ ಸಮಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್ ಉಪಸ್ಥಿತರಿರುವರು. ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್ ಕಿರಣ್ ಕುಮಾರ್ ಮುಖ್ಯ ಅತಿಥಿಗಳಾಗಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ದಾವಣಗೆರೆ ವಿ.ವಿ. ಕುಲಪತಿಗಳಾದ ಪ್ರೊ.ಬಿ.ಡಿ.ಕುಂಬಾರ, ಕುಲಸಚಿವರಾದ ಪ್ರೊ.ರಮೇಶ ಸಿ.ಕೆ, ಕುಲಸಚಿವರು (ಪ್ರಭಾರ) ಪ್ರೊ. ವೆಂಕಟರಾವ್ ಎಂ.ಪಲಾಟೆ ಭಾಗವಹಿಸುವರು.