ವಿನೂತನ ಮಹಿಳಾ ಸಮಾಜದ ವತಿಯಿಂದ ನಗರದ ವಿದ್ಯಾನಗರದ ವರಸಿದ್ದಿ ವಿನಾಯಕ ದೇವಸ್ಥಾನದ ಆವರಣದಲ್ಲಿ ಇಂದು ಸಂಜೆ 5 ಗಂಟೆಗೆ ಮಹಿಳಾ ದಿನಾಚರಣೆ ಅಂಗವಾಗಿ `ವಿನೂತನ ಸ್ತ್ರೀ ಸೂಪರ್ ಜೋಡಿ’ ಕಾರ್ಯಕ್ರಮ ಆಯೋಜಿಸಲಾಗಿದೆ.
ಪಾಲಿಕೆ ಸದಸ್ಯೆ ವೀಣಾ ನಂಜಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ರೇಖಾ ಓಂಕಾರಪ್ಪ ಅಧ್ಯಕ್ಷತೆ ವಹಿಸುವರು. ಸಿದ್ದಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿ’ಸೌಜ ಅವರನ್ನು ಸನ್ಮಾನಿಸಲಾಗುವುದು.
ತೀರ್ಪುಗಾರ ಬಿ.ಪ್ರಸನ್ನ, ಉದ್ಯಮಿ ಜಯ ವೇಣುಗೋಪಾಲ್ ಕಾರ್ಯಕ್ರಮದಲ್ಲಿ ಭಾಗವಹಿಸುವರು.