ನಗರದಲ್ಲಿ ಇಂದು ಮಹಿಳಾ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆ ಸಹಯೋಗದಲ್ಲಿ  ಇಂದು ಬೆಳಿಗ್ಗೆ 11.30 ಕ್ಕೆ ಜಿಲ್ಲಾಡಳಿತ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎಂ.ವಿ ಡಾ.ವೆಂಕಟೇಶ್ ಉದ್ಘಾಟಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣವರ ಅಧ್ಯಕ್ಷತೆ ವಹಿಸುವರು.

 ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಸೈಯದಾ ಅಫ್ರಿನ್ ಭಾನು ಎಸ್.ಬಳ್ಳಾರಿ, ಮಹಾನಗರಪಾಲಿಕೆ ಆಯುಕ್ತರಾದ ರೇಣುಕಾ, ಉಪವಿಭಾಗಾಧಿಕಾರಿ ದುಗಾಶ್ರೀ.ಎನ್, ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರಾದ ವೀಣಾ.ಎಸ್.ಆರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ
ಸಿ.ಆರ್. ರಶ್ಮಿ ಭಾಗವಹಿಸುವರು.

error: Content is protected !!