ರೈಲುಗಳ ಮೇಲೆ ಕಲ್ಲು ತೂರಾಟ : 139 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ

ದಾವಣಗೆರೆ ಮಾ. 12 –  ನೈಋತ್ಯ ರೈಲ್ವೆ ವಲಯ ವ್ಯಾಪ್ತಿಯಲ್ಲಿ ಇತ್ತೀಚಿಗೆ ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟದ ಕೆಲ ಘಟನೆಗಳು ಚಳಗೇರಿ, ಕುಮಾರಪಟ್ಟಣಂ, ಚಿಕ್ಕಬಾಣಾವರ, ಕುಪ್ಪಂ ಮತ್ತು ಧರ್ಮಾವರಂ ರೈಲು ನಿಲ್ದಾಣಗಳ ಬಳಿ ವರದಿಯಾಗಿದ್ದು, ಇಂತಹ ಘಟನೆಗಳನ್ನು ಕ್ರಿಮಿನಲ್ ಅಪರಾಧವೆಂದು ಪರಿಗಣಿಸಿದ್ದು. ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ರೈಲ್ವೆ ರಕ್ಷಣಾ ಪಡೆ ಮತ್ತು ರೈಲ್ವೆ ಪೊಲೀಸ್ ಸಿಬ್ಬಂದಿ ಅಂತಹ ಪ್ರದೇಶಗಳಲ್ಲಿ ಜಾಗರೂಕರಾಗಿದ್ದಾರೆ.

ಯಾವುದೇ ವ್ಯಕ್ತಿ, ಕಾನೂನುಬಾಹಿರ ಕೃತ್ಯ ಅಥವಾ ಉದ್ದೇಶಪೂರ್ವಕ ಲೋಪ ಅಥವಾ ನಿರ್ಲಕ್ಷ್ಯದಿಂದ ರೈಲಿನಲ್ಲಿ ಪ್ರಯಾಣಿಸುವ ಅಥವಾ ಇರುವ ವ್ಯಕ್ತಿಯ ಸುರಕ್ಷತೆಗೆ ಅಪಾಯವನ್ನುಂಟುಮಾಡಿದರೆ ಸೆಕ್ಷನ್ 154 ರ ಅಡಿ ಯಲ್ಲಿ ಒಂದು ವರ್ಷದವರೆಗೆ ಜೈಲು ಶಿಕ್ಷೆ, ಮತ್ತು ದಂಡ, ವಿಧಿಸಲಾಗುವುದು ಅಥವಾ ರೈಲಿನ ರೋಲಿಂಗ್ ಸ್ಟಾಕ್ ಗೆ ಅಡ್ಡಿಪಡಿಸುವುದು ಮತ್ತು ಅಡ್ಡಿಪಡಿಸಲು ಪ್ರಯತ್ನಿಸುವುದನ್ನು ಮಾಡಿದಲ್ಲಿ ಅಂತಹ ವ್ಯಕ್ತಿಗೆ ಸೆಕ್ಷನ್ – 153 ರ ಅಡಿಯಲ್ಲಿ ಐದು ವರ್ಷಗಳವರೆಗೆ ಜೈಲು ಶಿಕ್ಷೆಗೆ ಗುರಿಯಾಗುತ್ತಾರೆ. ರೈಲುಗಳ ಮೇಲೆ ಕಲ್ಲು ತೂರಾಟದಂತಹ ಘಟನೆಗಳು ಕಂಡುಬಂದರೆ ಸಹಾಯವಾಣಿ ಸಂಖ್ಯೆ 139 ಗೆ ಕರೆಮಾಡಿ ಮಾಹಿತಿ ನೀಡುವಂತೆ  ವಲಯದ ಪ್ರಧಾನ ವ್ಯವಸ್ಥಾಪಕರಾದ ಅರವಿಂದ ಶ್ರೀವಾಸ್ತವ ತಿಳಿಸಿದ್ದಾರೆ.

error: Content is protected !!