ದಾವಣಗೆರೆ,ಮಾ.12- ತಾಲ್ಲೂಕಿನ ಕೈದಾಳೆ ಗ್ರಾಮದ ಶ್ರೀ ಮಲ್ಲಿಕಾರ್ಜುನ ಟ್ರಸ್ಟ್ ವತಿಯಿಂದ ನಾಡಿದ್ದು 14ರ ಗುರುವಾರ ಬೆಳಿಗ್ಗೆ 7.45ರಿಂದ 8.15ರವರೆಗೆ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಮಹಾ ರಥೋತ್ಸವ ಜರುಗಲಿದೆ.
ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ ಜವಳ ಕಾರ್ಯಕ್ರಮ, 3 ರಿಂದ ಸಂಜೆ 6-30 ರವರೆಗೆ ಜೋಡಿ ಬಸವಗಳ ಹಾಗೂ ಗ್ರಾಮದ ಟ್ರ್ಯಾಕ್ಟರ್ಗಳ ಮೂಲಕ ಮೆರವಣಿಗೆಯೊಂದಿಗೆ ಪಾನಕ ವಿತರಣೆ. ಸಂಜೆ 5 ರಿಂದ ಸಂಜೆ 6-30 ರವರೆಗೆ ಅಗ್ನಿಕುಂಡ ಪೂಜೆ ಮತ್ತು ಓಕಳಿ ಹಾಗೂ ರಾತ್ರಿ 9-30 ರಿಂದ ಹೂವಿನ ಅಡ್ಡಪಲ್ಲಕ್ಕಿ ಉತ್ಸವ, ವೀರಗಾಸೆ, ಪುರವಂತರ ಒಡಪು ಗೀತೆಗಳೊಂದಿಗೆ ಮುಂಜಾನೆ 2-30 ಗಂಟೆಗೆ ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ಸ್ವಾಮಿಯು ನಡೆ ಮಡಿಯೊಂದಿಗೆ ಅಗ್ನಿಕುಂಡ ಪ್ರವೇಶ ಇರುತ್ತದೆ.
ದಿನಾಂಕ 15 ರಂದು ಸಂಜೆ 5 ಗಂಟೆಗೆ ದಿಬ್ಬಣ ಕಾರ್ಯಕ್ರಮವಿರುತ್ತದೆ.