ಇಂದು ಸಂಸದರ ರಿಪೋರ್ಟ್ ಕಾರ್ಡ್‌ ಬಿಡುಗಡೆ

ಲೋಕಸಭಾ ಕ್ಷೇತ್ರದ ಚುನಾವಣಾ ಕಾರ್ಯಾಲಯ ಉದ್ಘಾಟನೆ 

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಳೆದ 10 ವರ್ಷಗಳಲ್ಲಿ ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರ ಅವರು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವ ಯೋಜನೆಗಳ ಸಮಗ್ರ ಮಾಹಿತಿಯುಳ್ಳ ಸಾಧನೆಯ ಪರ್ವ `ರಿಪೋರ್ಟ್ ಕಾರ್ಡ್’ ಬಿಡುಗಡೆ ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣಾ ಕಾರ್ಯಾಲಯ ಉದ್ಘಾಟನೆ ಕಾರ್ಯವನ್ನು ಇಂದು  ಹಮ್ಮಿಕೊಳ್ಳಲಾಗಿದೆ.

 ವಾಣಿ ಹೊಂಡ ಹಳೇ ಶೋ ರೂಂ ಆವರಣದಲ್ಲಿ ಬೆಳಿಗ್ಗೆ 11ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ  ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿದ್ದಾರೆ. ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರುಗಳಾದ ಭೈರತಿ ಬಸವರಾಜ್, ಬಿ.ಪಿ. ಹರೀಶ್, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಉಪಸ್ಥಿತರಿರಲಿದ್ದಾರೆ.

error: Content is protected !!