ದಾವಣಗೆರೆ,ಮಾ.15- ಸಾರ್ವಜನಿಕ ಹಿತದೃಷ್ಟಿಯಿಂದಾಗಿ, ಪರಿಸರ ನೈರ್ಮಲ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಾಡಿದ್ದು ದಿನಾಂಕ 17 ರಿಂದ 20 ರವರೆಗೆ ನಡೆಯುವ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಹಾಗೂ ವಿನೋಬ ನಗರ ಶ್ರೀ ಚೌಡೇಶ್ವರಿ ದೇವಿ ಜಾತ್ರೆ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರಾಣಿ ಬಲಿ ನೀಡುವುದನ್ನು ಮತ್ತು ಇತರೆ ಪ್ರಾಣಿಗಳನ್ನು ತೆಗೆದುಕೊಂಡು ಬರುವುದು, ಮಾರಕಾಸ್ತ್ರಗಳನ್ನು ತರುವುದು ಹಾಗೂ ಇತರೆ ಅನಾಗರಿಕ ಪದ್ಧತಿಗಳನ್ನು ಮಾಡುವ ಆಚರಣೆಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ತಿಳಿಸಿದ್ದಾರೆ.
February 26, 2025