ಮಾಜಿ ಸಚಿವ ಎಚ್.ಆಂಜನೇಯ ಕಂಬನಿ
ದಾವಣಗೆರೆ, ಮಾ. 17 – ಚಿತ್ರದುರ್ಗ – ದಾವಣಗೆರೆ ಅವಳಿ ಜಿಲ್ಲೆಯಲ್ಲಿ ರಾಜಕೀಯ ಛಾಪು ಮೂಡಿಸಿದ್ದ ನಾಗಮ್ಮ ಕೇಶವಮೂರ್ತಿ ಅವರು ನಾಡಿನ ದಿಟ್ಟ ಮಹಿಳೆ ಎಂದು ಮಾಜಿ ಸಚಿವ ಎಚ್. ಆಂಜನೇಯ ಬಣ್ಣಿಸಿದ್ದಾರೆ.
ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಗಳ ಮೂಲಕ ರಾಜ್ಯದ ಅಭಿವೃದ್ದಿಗೆ ಶ್ರಮಿಸಿದ್ದ ಸಿಎನ್ಕೆ ಬದ್ಧತೆ ಈಗಲೂ ಮಾದರಿಯಾಗಿದೆ. ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ದಾವಣಗೆರೆ ನಗರ, ಜಿಲ್ಲೆಯ ಅಭಿವೃದ್ದಿಗೆ ಅವರು ನೀಡಿದ ಕೊಡುಗೆ ಸ್ಮರಣೀಯ ಎಂದು ಅವರು ಹೇಳಿದ್ದಾರೆ.
ಅದರಲ್ಲೂ ಶಿಕ್ಷಣ ಸಚಿವರಾಗಿದ್ದ ಸಂದರ್ಭದಲ್ಲಿ ಶಿಕ್ಷಕರ ನೇಮಕಾತಿಯಲ್ಲಿನ ಅಕ್ರಮಕ್ಕೆ ಕಡಿವಾಣ ಹಾಕಲು ನೇರ ನೇಮಕಾತಿ ಪದ್ಧತಿ ಜಾರಿಗೊಳಿಸುವ ಮೂಲಕ ಅರ್ಹರಿಗೆ ಉದ್ಯೋಗ ಸಿಗುವ ವ್ಯವಸ್ಥೆ ತಂದರು. ಈ ಮೂಲಕ ಮಕ್ಕಳಿಗೆ ಗುಣಮಟ್ಟದ ಬೋಧನೆ ಸಿಗುವ ಜೊತೆಗೆ ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗೆ ಶ್ರಮಿಸಿದ್ದರು.
ನನ್ನಂತಹ ಯುವಕರು ರಾಜಕೀಯದತ್ತ ಆಕರ್ಷಣೆ ಬೆಳೆಸಿಕೊಂಡು ಉನ್ನತ ರಾಜಕೀಯ ಸ್ಥಾನಮಾನ ಪಡೆಯಲು ನಾಗಮ್ಮ ಕೇಶಮೂರ್ತಿ ಅವರೇ ಮುಖ್ಯ ಕಾರಣಕರ್ತರು. ನಮ್ಮನ್ನು ಸ್ವಂತ ಮಕ್ಕಳಂತೆ ಕಾಣುತ್ತಿದ್ದ, ನಮ್ಮ ರಾಜಕೀಯ ಬೆಳವಣಿಗೆಗೆ ಶ್ರಮಿಸುತ್ತಿದ್ದ ಅವರು ನಮ್ಮ ಪಾಲಿಗೆ ರಾಜಕೀಯ ಗುರು ಅಷ್ಟೇ ಅಲ್ಲದೇ ಅಮ್ಮ ಆಗಿದ್ದರು. ಅವರ ಅಗಲಿಕೆ ಸುದ್ದಿ ಸ್ವಂತ ತಾಯಿಯನ್ನೇ ಕಳೆದುಕೊಂಡಷ್ಡು ದುಃಖವನ್ನು ಉಂಟು ಮಾಡಿದೆ. ನಮ್ಮಂತಹ ರಾಜಕಾರಣಿಗಳ ಪಾಲಿಗೆ ತಾಯಿ ಆಗಿದ್ದ ಅವರ ಸೇವೆ, ಮಾತೃವಾತ್ಸಲ್ಯ ಇನ್ನೂ ನೆನಪಷ್ಟೇ ಎಂಬುದು ದುಃಖಕರ ವಿಷಯವಾಗಿದೆ ಎಂದು ಆಂಜನೇಯ ತಮ್ಮ ಸಂತಾಪ ಸಂದೇಶದಲ್ಲಿ