ದಾವಣಗೆರೆ, ಮಾ.17- ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿಯ ಜಾತ್ರೆಯ ಅಂಗವಾಗಿ ನಾಡಿದ್ದು ದಿನಾಂಕ 19 ಮತ್ತು 20ರಂದು ಕೃಷಿ ಉತ್ಪನ್ನಗಳ ವ್ಯಾಪಾರ-ವಹಿವಾಟು ಸ್ಥಗಿತಗೊಳಿಸಲಾಗಿದೆ. ವರ್ತಕರು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸದೇ ಇರುವುದರಿಂದ ರೈತರು ಕೃಷಿ ಉತ್ಪನ್ನವನ್ನು ಮಾರುಕಟ್ಟೆಗೆ ತರಬಾರದೆಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.
January 10, 2025