ನಾಳೆ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ

ನಾಳೆ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ

ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ, ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಸಮಾರಂಭ

ಬಾಳೆಹೊನ್ನೂರು, ಮಾ. 20 – ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದಲ್ಲಿ  ಇಂದಿನಿಂದ ಇದೇ ದಿನಾಂಕ 26ರ ವರೆಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಜಾತ್ರಾ ಮಹೋತ್ಸವ ಜರುಗಲಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 

ನಾಳೆ ದಿನಾಂಕ 21ರಂದು ಸಂಜೆ ಸಾವಯವ ಕೃಷಿ-ಒಂದು ಚಿಂತನ ಗೋಷ್ಠಿಯನ್ನು ಮಾಜಿ ಮುಖ್ಯ ಮಂತ್ರಿ ಜಗದೀಶ್‌ ಶೆಟ್ಟರ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕ ಜಗದೀಶ ಗುಡಗುಂಟಿ, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ,  ಮಾಜಿ ಶಾಸಕ ಕೆ.ಎಸ್. ಲಿಂಗೇಶ್, ರೈತ ಮುಖಂಡ ಹೆಚ್.ಆರ್. ಬಸವರಾಜ್, ನಂದಗೋಕುಲದ ಆನಂದ ಆಷೀಷರ್, ಶಿವಮೊಗ್ಗದ ಎಸ್.ಎಸ್.ಜ್ಯೋತಿ ಪ್ರಕಾಶ್, ಎನ್.ಜೆ. ರಾಜಶೇಖರ ಭಾಗವಹಿಸುವರು. ಬಂಕಾಪುರ ರೇವಣಸಿದ್ಧೇಶ್ವರ ಶ್ರೀಗಳು, ಹುಕ್ಕೇರಿ ಚಂದ್ರಶೇಖರ ಶ್ರೀಗಳು, ನೆಗಳೂರು ಗುರುಶಾಂತೇಶ್ವರ ಶ್ರೀಗಳು ಪಾಲ್ಗೊಳ್ಳುವರು.

ನಾಡಿದ್ದು ದಿನಾಂಕ 22ರಂದು ಬೆಳಿಗ್ಗೆ 11.30ಕ್ಕೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ-ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು  ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸುವರು. ಬಾಗಲಕೋಟೆಯ ಡಾ|| ಮಹಾಜಬೀನ ಎಸ್. ಮಧುರಕರ ಇವರಿಗೆ 2024ನೇ ಸಾಲಿನ ‘ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಮುಖ್ಯ ಅತಿಥಿಗಳಾಗಿ ಸಚಿವ ಕೆ.ಜೆ. ಜಾರ್ಜ್, ಈಶ್ವರ ಖಂಡ್ರೆ, ಲಕ್ಷ್ಮಿ ಹೆಬ್ಬಾಳಕರ, ಎನ್.ಎಸ್. ಬೋಸರಾಜ್, ಡಾ|| ಶರಣ ಪ್ರಕಾಶ ಪಾಟೀಲ, ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಟಿ.ಡಿ. ರಾಜೇಗೌಡರು, ಎ.ಬಿ. ಸುದರ್ಶನ್, ಹೆಚ್.ಬಿ. ರಾಜಗೋಪಾಲ, ಸುಧೀರ ಕುಮಾರ್ ಮುರೋಳಿ ಭಾಗವಹಿಸುವರು. ಎಮ್ಮಿಗನೂರು ವಾಮದೇವ ಮಹಂತ ಶ್ರೀಗಳು, ಅಮ್ಮಿನಭಾವಿ ಅಭಿನವ ಶಾಂತಲಿಂಗ ಶ್ರೀಗಳು, ಸಿದ್ಧರಬೆಟ್ಟದ ವೀರಭದ್ರ ಶ್ರೀಗಳು, ಗೌರಿಗದ್ದೆ ಅವಧೂತ ಆಶ್ರಮದ ವಿನಯ ಗುರೂಜಿ ಉಪಸ್ಥಿತರಿರುವರು. 

ದಿನಾಂಕ 23ರಂದು ಸಂಜೆ ಯುವ ಜನಾಂಗದಲ್ಲಿ ಧರ್ಮ ಪ್ರಜ್ಞೆ-ರಾಷ್ಟ್ರ ಪ್ರಜ್ಞೆ ಸಮಾರಂಭವನ್ನು ಮಾಜಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಸಚಿವ ಸಿ.ಸಿ. ಪಾಟೀಲ, ಶಾಸಕ ಹೆಚ್.ಕೆ. ಸುರೇಶ್, ಮಾಜಿ ಸಚಿವ ಸಿ.ಟಿ. ರವಿ, ಡಿ.ಎನ್. ಜೀವರಾಜ್, ಮಾಜಿ ಶಾಸಕ ಬೆಳ್ಳಿ ಪ್ರಕಾಶ, ಡಿ.ಎಸ್. ಸುರೇಶ ಆಗಮಿಸುವರು. ಸೂಡಿ ಡಾ|| ಕೊಟ್ಟೂರು ಬಸವೇಶ್ವರ ಶ್ರೀಗಳು, ಹರಪನಹಳ್ಳಿ  ವರಸದ್ಯೋಜಾತ ಶ್ರೀಗಳು ಪಾಲ್ಗೊಳ್ಳುವರು. 

ದಿನಾಂಕ 24ರಂದು ಸಂಜೆ ಜಾನಪದ ಹಬ್ಬವನ್ನು ಜಾನಪದ ತಜ್ಞ ಡಾ. ರಾಮು ಮೂಲಗಿ ಉದ್ಘಾಟಿಸಲಿದ್ದು ಶಾಸಕರಾದ ಹೆಚ್.ಡಿ. ತಮ್ಮಯ್ಯ, ಡಿ.ಹೆಚ್. ಶ್ರೀನಿವಾಸ, ಮಾಜಿ ವಿ.ಪ. ಸದಸ್ಯರಾದ ಗಾಯತ್ರಿ ಶಾಂತೇಗೌಡರು, ಲಿಂಗಸುಗೂರು ಮಾತಾ ನಂದಿಕೇಶ್ವರಿ ಅಮ್ಮನವರು, ರೋಟರಿ ಸಂಸ್ಥೆ ಗವರ್ನರ್ ಕು.ಬಿ.ಸಿ. ಗೀತಾ, ಬೆಂಗಳೂರಿನ ಬೀರೂರು ಶಿವಸ್ವಾಮಿ ಮುಖ್ಯ ಅತಿಥಿಗಳಾಗಿರುವರು. ಮುಕ್ತಿಮಂದಿರದ ವಿಮಲ ರೇಣುಕ ಮುಕ್ತಿಮುನಿ ಶ್ರೀಗಳು, ಶಿರಕೋಳ ಗುರುಸಿದ್ದೇಶ್ವರ ಶ್ರೀಗಳು ಪಾಲ್ಗೊಳ್ಳುವರು. 

ದಿನಾಂಕ 25ರಂದು ಸಂಜೆ ನೈತಿಕ ಮೌಲ್ಯಗಳ ಸಂರಕ್ಷಣೆ ಸಮಾರಂಭವನ್ನು ಮೈಸೂರು ಡಾ|| ಮುಮ್ಮಡಿ ಚಂದ್ರಶೇಖರ ಶ್ರೀಗಳು ಉದ್ಘಾಟಿಸುವರು. ಕವಲೇದುರ್ಗ ಮರುಳಸಿದ್ಧ ಶ್ರೀಗಳು, ಬೀರೂರು ರುದ್ರಮುನಿ ಶ್ರೀಗಳು, ಚಿಕ್ಕಮಗಳೂರು ಚಂದ್ರಶೇಖರ ಶ್ರೀಗಳು, ರಾಯಚೂರು ಶಾಂತಮಲ್ಲ ಶ್ರೀಗಳು, ಶ್ರೀನಿವಾಸ ಸರಡಗಿ ರೇವಣಸಿದ್ಧೇಶ್ವರ ಶ್ರೀಗಳು, ರಾಯಚೂರು ಅಭಿನವ ರಾಚೋಟೇಶ್ವರ ಶ್ರೀಗಳು ಉಪಸ್ಥಿತರಿರುವರು. 

ದಿನಾಂಕ 26ರಂದು ಭದ್ರಾ ನದಿ ತೀರದಲ್ಲಿ ಸುರಗಿ ಸಮಾರಾಧನೆಯೊಂದಿಗೆ ಸಮಾರಂಭ ಮಂಗಲಗೊಳ್ಳುವು ದಾಗಿ ಶ್ರೀ ರಂಭಾಪುರಿ ಜಗದ್ಗುರುಗಳು ವಿವರಿಸಿದ್ದಾರೆ.

error: Content is protected !!