ಹೊನ್ನಾಳಿ ಹಿರೇಕಲ್ಮಠದ ಲಿಂ.ಮೃತ್ಯುಂಜಯ ಶಿವಾಚಾರ್ಯ ಸ್ವಾಮೀಜಿ ಅವರ 54ನೇ ವಾರ್ಷಿಕ ಪುಣ್ಯಾರಾಧನೆ ಮತ್ತು ಲಿಂ.ಒಡೆಯರ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರ 9ನೇ ವಾರ್ಷಿಕ ಸಂಸ್ಮರಣೆ ಕಾರ್ಯಕ್ರಮಗಳ ಪ್ರಯುಕ್ತ ಹಿರೇಕಲ್ಮಠದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಸಾಮೂಹಿಕ ವಿವಾಹ ಮತ್ತು `ಚಂದ್ರಶೇಖರ ಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿವೆ.
ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಸಾನಿಧ್ಯ ವಹಿಸಲಿದ್ದು. ಮುಷ್ಟೂರು ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳು ಅಧ್ಯಕ್ಷತೆ ವಹಿಸುವರು. ಸಂಸದ ಜಿ.ಎಂ.ಸಿದ್ದೇಶ್ವರ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಶಾಸಕ ಡಿ.ಜಿ.ಶಾಂತನಗೌಡ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತಿತರರು ಭಾಗವಹಿಸುವರು. ಈ ಬಾರಿಯ `ಚಂದ್ರಶೇಖರ ಶ್ರೀ’ ಪ್ರಶಸ್ತಿಯನ್ನು ಎಚ್.ಆರ್. ಬಸವರಾಜಪ್ಪ ಅವರಿಗೆ ನೀಡಿ ಗೌರವಿಸಲಾಗುವುದು.