ದಾವಣಗೆರೆ,ಮಾ.21- ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ ನಡೆಯುತ್ತಿದ್ದು, ಇಂದು ನಡೆದ ಉರ್ದು, ಸಂಸ್ಕೃತ ಪರೀಕ್ಷೆಗೆ 1028 ವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕರಿಸಿದ್ದಪ್ಪ ತಿಳಿಸಿದ್ದಾರೆ. ಉರ್ದು ವಿಷಯವನ್ನು 572 ವಿದ್ಯಾರ್ಥಿಗಳು ತೆಗೆದುಕೊಂಡಿದ್ದು, ಅದರಲ್ಲಿ 26 ವಿದ್ಯಾರ್ಥಿಗಳು ಗೈರಾಗಿದ್ದರು. ಸಂಸ್ಕೃತ ವಿಷಯವನ್ನು 484 ವಿದ್ಯಾರ್ಥಿಗಳು ತೆಗೆದುಕೊಂಡಿದ್ದು ಇಬ್ಬರು ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಅವರು ತಿಳಿಸಿದ್ದಾರೆ.
January 10, 2025