ನಗರದ ನ್ಯಾಯಾಲಯದ ಆವರಣದಲ್ಲಿ ಇಂದು ಅಂತರರಾಷ್ಟ್ರೀಯ ಜಲ ದಿನಾಚರಣೆ

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಜಿಲ್ಲಾ ವಕೀಲರ ಸಂಘ ಮತ್ತು ಎಸ್.ಬಿ.ಐ  ಇವರ ಸಂಯುಕ್ತಾಶ್ರಯದಲ್ಲಿ ಇಂದು ಬೆಳಗ್ಗೆ 10.30 ಕ್ಕೆ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಅಂತರರಾಷ್ಟ್ರೀಯ ಜಲ ದಿನಾಚರಣೆ ಮತ್ತು ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. 

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ಕಾರ್ಯಕ್ರಮ ಉದ್ಘಾಟಿಸುವರು. ವಕೀಲರ ಸಂಘದ ಅಧ್ಯಕ್ಷರಾದ ಎಲ್.ಹೆಚ್.ಅರುಣ್‍ಕುಮಾರ್ ಅಧ್ಯಕ್ಷತೆ ವಹಿಸುವರು. ನ್ಯಾಯಾಧೀಶರಾದ ಜೆ.ವಿ.ವಿಜಯಾನಂದ,  ದಶರಥ, ಪ್ರವೀಣ ಕುಮಾರ್ ಆರ್.ಎನ್, ಶಿವಪ್ಪ ಗಂಗಪ್ಪ ಸಲಗರೆ ಮತ್ತು ಮಹಾವೀರ ಮ.ಕರೆಣ್ಣವರ, ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಅಧಿಕಾರಿ ಡಾ. ಹೆಚ್. ಲಕ್ಷ್ಮಿಕಾಂತ, ಎಸ್.ಬಿ.ಐ ಪ್ರಾದೇಶಿಕ ವ್ಯವಸ್ಥಾಪಕ ಅನಿಲ್ ಬಿಹಾರಿ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ  ಜಿ.ಕೆ.ಬಸವರಾಜು ಗೋಪನಾಳ್, ಕಾರ್ಯದರ್ಶಿ ಬಸವರಾಜ್ ಎಸ್,  ಸಹ ಕಾರ್ಯದರ್ಶಿ ಎ.ಎಸ್.ಮಂಜುನಾಥ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

error: Content is protected !!