ದಾವಣಗೆರೆ, ಮಾ.22- ನಗರದ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿ 25ನೇ ವರ್ಷದ ಹೋಳಿಹಬ್ಬ ಆಚರಣೆಯನ್ನು ನಾಡಿದ್ದು ದಿನಾಂಕ 24 ರ ಭಾನುವಾರ ನಡೆಸಲಾಗುವುದು ಎಂದು ಸಾರ್ವಜನಿಕ ಹಿಂದೂ ಮಹಾಗಣಪತಿ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಜೊಳ್ಳಿ ಗುರು ತಿಳಿಸಿದ್ದಾರೆ. ದಿನಾಂಕ 25 ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಇರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಒಂದು ದಿನ ಮುಂಚಿತವಾಗಿ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿ ಹೋಳಿ ಹಬ್ಬ ಆಚರಣೆ ಮಾಡಲು ತೀರ್ಮಾನಿಸಲಾಗಿದೆ ಎಂದವರು ಹೇಳಿದ್ದಾರೆ.
February 27, 2025