ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ಇಂದು ಬೆಳಿಗ್ಗೆ 11 ಗಂಟೆೆಗೆ ಸಂಜೀವಿನಿ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಅಂಡ್ ಪ್ಯಾರಾಮೆಡಿಕಲ್ ಸೈನ್ಸ್ ಸಭಾಂಗಣದಲ್ಲಿ `ದತ್ತಿ ಉಪನ್ಯಾಸ ಮತ್ತು ಶರಣ ಚಿಂತನ’ ಕಾರ್ಯಕ್ರಮ ನಡೆಯಲಿದೆ.
ಸಂಜೀವಿನಿ ಇನ್‌ಸ್ಟಿಟ್ಯೂಟ್ ಅಧ್ಯಕ್ಷರಾದ ಆರ್.ಹೆಚ್. ಲೀಲಾವತಿ ಕಾರ್ಯಕ್ರಮ ಉದ್ಘಾಟಿಸುವರು. ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ನಿವೃತ್ತ ಶಿಕ್ಷಣಾಧಿಕಾರಿ ಭರಮಪ್ಪ ಮೈಸೂರು `ವಚನ ಸಂಸ್ಕೃತಿ ಮತ್ತು ವೈಚಾರಿಕತೆ’ ಕುರಿತು ಮಾತನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶರಣ ಸಾಹಿತ್ಯ ಪರಿಷತ್ ನಗರ ಘಟಕದ ಅಧ್ಯಕ್ಷ ಎಂ. ಪರಮೇಶ್ವರಪ್ಪ, ತಾಲ್ಲೂಕು ಅಧ್ಯಕ್ಷ ಎಸ್.ಬಿ. ರುದ್ರೇಗೌಡ ಗೋಪನಾಳು, ಜಿಲ್ಲಾ ಕಾರ್ಯದರ್ಶಿ ಎನ್.ಎಸ್. ರಾಜು, ಬಿ.ಟಿ. ಪ್ರಕಾಶ್ ಭಾಗವಹಿಸಲಿದ್ದಾರೆ.