ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ಕೆ.ಎಸ್.ಎಸ್. ಶಿಕ್ಷಣ ಮಹಾವಿದ್ಯಾ ಲಯ, ಹಿರಿಯ ನಾಗರಿಕರ ಸಹಾಯವಾಣಿ ಇವರ ಸಹ ಯೋಗದಲ್ಲಿ ಇಂದು ಮಧ್ಯಾಹ್ನ 2.30 ಕ್ಕೆ ನಗರದ ಕೆಎಸ್ಎಸ್ ಶಿಕ್ಷಣ ಮಹಾವಿದ್ಯಾಲಯದ ಸಭಾಂ ಗಣದಲ್ಲಿ ಶಾಲಾ-ಕಾಲೇಜು ಅಂಗಳದಲ್ಲಿ ಸಾಹಿತ್ಯೋತ್ಸವದ ಅಂಗವಾಗಿ ದತ್ತಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಹಾವಿದ್ಯಾಲಯದ ಕಾರ್ಯದರ್ಶಿ ಬಿ. ವಿಕಾಸ್ ಕಾರ್ಯಕ್ರಮ ಉದ್ಘಾಟಿಸುವರು. ಪ್ರಾಚಾರ್ಯ ಬಿ.ಎಸ್ ಚನ್ನ ಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಆಹಾರ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಬಿ.ಟಿ. ಪ್ರಕಾಶ್ `ಕನ್ನಡ ನಾಡು ನುಡಿಯ ಹಿರಿಮೆ’ ಕುರಿತು ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗ ಳಾಗಿ ಷಡಕ್ಷರಪ್ಪ ಎಂ. ಬೇತೂರು, ಪರಿಮಳ ಜಗದೀಶ್, ಮಮತಾ ರುದ್ರಮುನಿ, ನವೀನ್ ಕುಮಾರ್, ಸುಮತಿ ಜಯಪ್ಪ ಮತ್ತಿತರರು ಭಾಗವಹಿಸಲಿದ್ದಾರೆ.