ಮೌಲಾನಾ ಅಜಾದ್ ಶಿಕ್ಷಣ ಮತ್ತು ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಮಾಜಿ ಶಿಕ್ಷಣ ಸಚಿವೆ ಹಾಗೂ ವಿಧಾನಸಭೆಯ ಉಪಾಧ್ಯಕ್ಷರಾಗಿದ್ದ ಶ್ರೀಮತಿ ಸಿ. ನಾಗಮ್ಮ ಕೇಶವಮೂರ್ತಿ ಅವರ ಶ್ರದ್ಧಾಂಜಲಿ ಪ್ರಯುಕ್ತ ಇಂದು ನಗರದ ಶ್ರೀ ವಿರಕ್ತ ಮಠ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೋಟ್ಬುಕ್ ಮತ್ತು ಪೆನ್ನುಗಳನ್ನು ವಿತರಣೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮ ದಲ್ಲಿ ವಿರಕ್ತಮಠ ಶ್ರೀ ಬಸವಪ್ರಭು ಸ್ವಾಮೀಜಿ ಉಪಸ್ಥಿತರಿರುವರು ಎಂದು ಅಧ್ಯಕ್ಷ ಸಿ.ಆರ್. ನಸೀರ್ ಅಹಮ್ಮದ್ ತಿಳಿಸಿದ್ದಾರೆ.
February 26, 2025