ಇಂದಿನಿಂದ ಸೂಳೆಕೆರೆ ಹಳ್ಳಕ್ಕೆ ನೀರು ಬಿಡುಗಡೆ

ದಾವಣಗೆರೆ, ಮಾ.27 –  ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್  ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾ. 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ. 

 ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೇ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

error: Content is protected !!