ನಗರದಲ್ಲಿ ಇಂದು ದಾವಣಗೆರೆ ಗೃಹಿಣಿ ಸ್ಪರ್ಧೆ

ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕಲಾಕುಂಚ ಮಹಿಳಾ ವಿಭಾಗದಿಂದ `ದಾವಣಗೆರೆ ಗೃಹಿಣಿ ಸ್ಪರ್ಧೆ-2024’ಯು ಇಂದು ಬೆಳಿಗ್ಗೆ 10-30ಕ್ಕೆ ಕಲಾಕುಂಚ ಕಛೇರಿ ಸಭಾಂಗಣದಲ್ಲಿ ನಡೆಯಲಿದೆ.

ಧಾರವಾಡದ ಖುಷಿ ಸಂಸ್ಕೃತಿ ವಿದ್ಯಾಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ರೇಣುಕಾದೇವಿ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದು, ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಾವಣಗೆರೆ ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್‍ ಶ್ರೀಮತಿ ಡಿ.ಹೆಚ್. ನಿರ್ಮಲಾ, ಸಂಸ್ಥೆಯ ಸಂಸ್ಥಾಪಕ ಶ್ರೀಮತಿ ಜ್ಯೋತಿ ಗಣೇಶ್‍ಶೆಣೈ, ಕಲಾಕುಂಚ ಎಂ.ಸಿ.ಸಿ. ಶಾಖೆಯ ಅಧ್ಯಕ್ಷರಾದ ಶ್ರೀಮತಿ ಪ್ರಭಾ ರವೀಂದ್ರ ಆಗಮಿಸಲಿದ್ದಾರೆ.

error: Content is protected !!