ಆಫೀಸರ್ ಕ್ಲಬ್, ಜಿಲ್ಲಾ ಯೋಗ ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ಇಂದಿನಿಂದ ಇದೇ ದಿನಾಂಕ 15 ರವರೆಗೆ ಪ್ರತಿದಿನ ಬೆಳಿಗ್ಗೆ 6.15 ರಿಂದ ಯೋಗ ಶಿಬಿರ ನಡೆಯಲಿದೆ. ಜಿಲ್ಲಾಧಿಕಾರಿ ಡಾ. ವೆಂಕಟೇಶ್.ಎಂ.ವಿ ಶಿಬಿರ ಉದ್ಘಾಟಿಸಲಿದ್ದಾರೆ. ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಜಿಲ್ಲಾ ಯೋಗ ಒಕ್ಕೂಟದ ಅಧ್ಯಕ್ಷ ವಾಸುದೇವ್ ರಾಯ್ಕರ್ ಅಧ್ಯಕ್ಷತೆ ವಹಿಸುವರು. ವಿವರಕ್ಕೆ ಸಂಪರ್ಕಿಸಿ : 8197843543, 9035551568.
December 23, 2024