ಹರಪನಹಳ್ಳಿ, ಮಾ. 31 – ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ ಅವರಿಗೆ ಮತ ನೀಡಿ ಗೆಲ್ಲಿಸುವುದರೊಂದಿಗೆ ಶಾಸಕರಾದ ಎಂ.ಪಿ. ಲತಾ ಹಾಗೂ ಡಾ. ಪ್ರಭಾ ಮಲ್ಲಿಕಾರ್ಜುನ್ ಜೋಡೆತ್ತಾಗಿ ಅಭಿವೃದ್ಧಿ ಕೆಲಸ ಮಾಡಲು ಅವಕಾಶ ನೀಡಬೇಕು ಎಂದು ರೇಷ್ಮೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಡಿ. ಬಸವರಾಜ ಹೇಳಿದರು.
ಡಾ. ಪ್ರಭಾ ಮಲ್ಲಿಕಾರ್ಜುನ್ 1997ರಲ್ಲಿ ಶಾಮನೂರು ಕುಟುಂಬದ ಸೊಸೆಯಾಗಿ ಬಂದ ನಂತರ ಎಲೆಮರೆ ಕಾಯಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡಿದ್ದಾರೆ ಎಂದು ಅವರು ಹೇಳಿದರು.
ಪಟ್ಟಣದ ತರಳಬಾಳು ಕಲ್ಯಾಣ ಮಂಟಪದಲ್ಲಿ ನಿನ್ನೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.