ದಾವಣಗೆರೆ, ಏ.3- ಲೋಕಸಭಾ ಚುನಾವಣೆಗೆ ಬಹುಜನ ಸಮಾಜ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಳಿಸಲಾಗುವುದು ಎಂದು ಪಕ್ಷದ ಜಿಲ್ಲಾಧ್ಯಕ್ಷ ಡಿ. ಹನುಮಂತಪ್ಪ ಹೇಳಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳು ದಲಿತರಿಗೆ, ಹಿಂದುಳಿದವರಿಗೆ ಅನ್ಯಾಯ ಮಾಡುತ್ತಿವೆ. ನಮ್ಮ ಪಕ್ಷವು ಹಿಂದುಳಿದವರು, ದಲಿತರ ಹಾಗೂ ಅಲ್ಪಸಂಖ್ಯಾತರ ಪರವಾಗಿ ದನಿ ಎತ್ತುವ ಪಕ್ಷವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಬಹುಜನ ಸಮಾಜ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.
ತಾವೂ ಸೇರಿದಂತೆ ಯಶೋಧ ಪ್ರಕಾಶ್ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದೇವೆ. ಈಗಾಗಲೇ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರವಾಸ ಮಾಡುತ್ತಿದ್ದೇವೆ. ಜಿಲ್ಲೆಯಲ್ಲಿ ಹಿಂದುಳಿದ ವರ್ಗಕ್ಕೆ ರಾಜಕೀಯವಾಗಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಯಶೋಧ ಪ್ರಕಾಶ್, ಎಂ. ಚಂದ್ರಪ್ಪ ಇದ್ದರು.