ಜಿ.ಎಂ. ಹಾಲಮ್ಮ ವಿಜ್ಞಾನ, ವಾಣಿಜ್ಯ ಪದವಿ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ

ಜಿ.ಎಂ. ಹಾಲಮ್ಮ ವಿಜ್ಞಾನ, ವಾಣಿಜ್ಯ  ಪದವಿ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ

ದಾವಣಗೆರೆ,ಏ.10- ನಗರದ ಜಿ.ಎಂ. ಹಾಲಮ್ಮ ಪದವಿ ಪೂರ್ವ ಕಾಲೇಜಿಗೆ 2023-2024  ನೇ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಿಂದ ಎಸ್. ಭಾಗ್ಯಶ್ರೀ 566 (ಶೇ.94.33), ವಾಣಿಜ್ಯ ವಿಭಾಗದಲ್ಲಿ ಕೆ.ಜೆ.ಬಿಂದು 577 (ಶೇ. 96.17) ಅಂಕಗಳೊಂದಿಗೆ ಉತ್ತಮ ಫಲಿತಾಂಶ ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಕಾಲೇಜಿನ ಆಡಳಿ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

error: Content is protected !!