ಎಲೆಬೇತೂರು : ಇಂದು ಶ್ರೀ ಸವಗದ್ದಿಗೆ ಸಂಗಮೇಶ್ವರ ಸ್ವಾಮಿಯ ರಥೋತ್ಸವ

ದಾವಣಗೆರೆ ತಾಲ್ಲೂಕಿನ ಎಲೆಬೇತೂರು ಗ್ರಾಮದಲ್ಲಿ ಶ್ರೀ ಸವಗದ್ದಿಗೆ ಸಂಗಮೇಶ್ವರ ಸ್ವಾಮಿಯ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ 6 ಗಂಟೆಗೆ ಉಚ್ಚಾಯ ರಥೋತ್ಸವ ಹಾಗೂ ಸಂಜೆ 4.30ಕ್ಕೆ ಶ್ರೀ ಸವಗದ್ದಿಗೆ ಸಂಗಮೇಶ್ವರ ಮಹಾಸ್ವಾಮಿಯ ರಥೋತ್ಸವ ಜರುಗಲಿದೆ. ನಾಳೆ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಹಾಗೂ ಸಂಜೆ 4 ಗಂಟೆಗೆ ಬಯಲು ಜಂಗೀ ಕುಸ್ತಿ, ರಾತ್ರಿ 7.30ಕ್ಕೆ ಪಲ್ಲಕ್ಕಿ ಉತ್ಸವದೊಂದಿಗೆ ಓಕುಳಿ ಉತ್ಸವ ನಡೆಯಲಿದೆ.

error: Content is protected !!