ನೇಹಾ ಹತ್ಯೆ : ನಸೀರ್ ಅಹ್ಮದ್ ಖಂಡನೆ

ದಾವಣಗೆರೆ, ಏ.19-  ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಪುತ್ರಿ ಕು. ನೇಹಾ ಹಿರೇಮಠ ಅವರ  ಹತ್ಯೆ ಪ್ರಕರಣವನ್ನು ಬಿಜೆಪಿ ಮುಖಂಡ ನಸೀರ್ ಅಹ್ಮದ್ ಖಂಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

error: Content is protected !!