ಮಾಗನೂರು ಬಸಪ್ಪ ಕಾಲೇಜಿಗೆ ಶೇ.99.48 ಫಲಿತಾಂಶ

ಮಾಗನೂರು ಬಸಪ್ಪ ಕಾಲೇಜಿಗೆ ಶೇ.99.48 ಫಲಿತಾಂಶ

ದಾವಣಗೆರೆ, ಏ. 21-  ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ–1 ರಲ್ಲಿ ಮಾಗನೂರು ಬಸಪ್ಪ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. 

ಕು. ಕವನ ಎಲ್.ಎ ವಿಜ್ಞಾನ ವಿಭಾಗದಲ್ಲಿ 600 ಅಂಕಗಳಿಗೆ 585 ಅಂಕಗಳನ್ನು ಗಳಿಸುವ ಮೂಲಕ ಕಾಲೇಜು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಕು. ವರ್ಷ ಕೆ.ಎಂ 577 ಅಂಕಗಳನ್ನು ಗಳಿಸಿ ಕಾಲೇಜಿಗೆ ದ್ವಿತೀಯ ಸ್ಥಾನವನ್ನು, ಕು. ಶ್ರೇಯ ಎಸ್.ಹೆಚ್ 575 ಅಂಕಗಳನ್ನು ಗಳಿಸಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. 

ಈ ವರ್ಷ ಕಾಲೇಜಿನಿಂದ 196 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, 195 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಾಲೇಜಿಗೆ ಶೇ.99.48 ಫಲಿತಾಂಶ ಬಂದಿರುತ್ತದೆ.  96 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು, 07 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ 100ಕ್ಕೆ 100 ಅಂಕಗಳನ್ನು ಗಳಿಸಿರುತ್ತಾರೆ.

error: Content is protected !!