ಮಾಜಿ ಸೈನಿಕರ ಮಕ್ಕಳಿಗೆ ಆರ್ಥಿಕ ನೆರವಿಗೆ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ

ದಾವಣಗೆರೆ, ಏ.22 – ಒಂದನೇ ತರಗತಿಯಿಂದ ವೃತ್ತಿಪರ ಶಿಕ್ಷಣವಲ್ಲದ ಪದವಿಯವರೆಗೆ ವ್ಯಾಸಂಗ ಮಾಡುತ್ತಿರುವ ಹವಾಲ್ದಾರ್ ರಾಂಕ್‌ವರೆಗಿನ ಮಾಜಿ ಸೈನಿಕರ ಮಕ್ಕಳು ಕೇಂದ್ರೀಯ ಸೈನಿಕ ಮಂಡಳಿಯಿಂದ ಆರ್ಥಿಕ ನೆರವನ್ನು ಪಡೆಯಲು ಕೇಂದ್ರೀಯ ಸೈನಿಕ ಮಂಡಳಿಯ ಜಾಲ ತಾಣ ONLINE.KSB.GOV.IN ನಲ್ಲಿ ಆರ್ಥಿಕ ನೆರವು (ಫೈನಾನ್ಸಿಯಲ್‌ನ್ಸ್) ಎಂಬ ಶೀರ್ಷಿಕೆಯಡಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿವಾಗಿರುತ್ತದೆ. ಕೇಂದ್ರೀಯ ಸೈನಿಕ ಮಂಡಳಿಯ ಮಾರ್ಗಸೂಚಿಯಂತೆ ಅರ್ಜಿ ಸಲ್ಲಿಸಿದ ಪ್ರತಿ ಹಾಗೂ ಸಂಬಂಧಿತ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಅನುಮೋದನೆ ಪಡೆಯಬೇಕು.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇಲ್ಲಿ ಅಥವಾ ದೂರವಾಣಿ ಸಂಖ್ಯೆ 08182-220925 ಗೆ ಸಂಪರ್ಕಿಸಲು ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

error: Content is protected !!