ಜಿಲ್ಲಾ ವಕೀಲರ ಸಂಘದ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 133ನೇ ಜಯಂತಿ ಅಂಗವಾಗಿ ಅಂಬೇಡ್ಕರ್ ಮತ್ತು ಸಂವಿಧಾನ ಎನ್ನುವ ವಿಷಯ ಕುರಿತು ಉಪನ್ಯಾಸ ಮಾಲಿಕೆ 8ನ್ನು ಇಂದು ಮಧ್ಯಾಹ್ನ 2.30ಕ್ಕೆ ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಉಚ್ಛನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಹೆಚ್. ಬಿಲ್ಲಪ್ಪ ನೆರವೇರಿಸುವರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್ಕುಮಾರ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ, 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ವಿ. ವಿಜಯಾನಂದ, ಕಾನೂನು ಅಧಿಕಾರಿ ಎ.ಎಂ.ಬಸವರಾಜು, ಸರ್ಕಾರಿ ಅಭಿಯೋಜಕ ಬಿ. ಮಂಜುನಾಥ್, ಜಿಲ್ಲಾ ಸರ್ಕಾರಿ ವಕೀಲ ಎಸ್. ಪ್ರಕಾಶ್ ಆಗಮಿಸಲಿದ್ದಾರೆ.
January 11, 2025