ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

ದಾವಣಗೆರೆ, ಏ.23 – ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಲೋಕಸೇವಾ ಆಯೋಗ ನಡೆಸಲಿರುವ ಕೆಎಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕರಾಮುವಿ ಕೇಂದ್ರ ಕಚೇರಿಯಲ್ಲಿ ನಡೆಸಲಾಗುವುದು. ಆಸಕ್ತರು ಇದೇ ದಿನಾಂಕ 30ರೊಳಗಾಗಿ  ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 0821-2515 944   ಸಂಪರ್ಕಿಸಲು ಕುಲಸಚಿವ ಪ್ರೊ. ಕೆ.ಬಿ. ಪ್ರವೀಣ ತಿಳಿಸಿದ್ದಾರೆ.

error: Content is protected !!