ಜಗಳೂರು : ಇಂದಿನ ಕಾಂಗ್ರೆಸ್ ಬೆಂಬಲಿತ ವೀರಶೈವ ಲಿಂಗಾಯತರ ಸಭೆಗೆ ಎಸ್ಸೆಸ್

ಜಗಳೂರು : ಇಂದಿನ ಕಾಂಗ್ರೆಸ್ ಬೆಂಬಲಿತ  ವೀರಶೈವ ಲಿಂಗಾಯತರ ಸಭೆಗೆ ಎಸ್ಸೆಸ್

ಜಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ವೀರಶೈವ ಲಿಂಗಾಯತರ ಸಭೆಯನ್ನು ಇಂದು ಬೆಳಿಗ್ಗೆ 11 ಗಂಟೆಗೆ ಜಗಳೂರಿನ ತರಳಬಾಳು ಕೇಂದ್ರದಲ್ಲಿ ಏರ್ಪಡಿಸಲಾಗಿದೆ. ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಗಳೂರು ತಾಲ್ಲೂಕು ವೀರಶೈವ ಮಹಾಸಭಾದ ಅಧ್ಯಕ್ಷ ಜೆ.ಎನ್.ಶಿವನಗೌಡ, ಪ್ರಧಾನ ಕಾರ್ಯದರ್ಶಿ ವೈ.ಎನ್.ಮಂಜುನಾಥ್ ತಿಳಿಸಿದ್ದಾರೆ.

error: Content is protected !!