ನಗರಕ್ಕೆ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ

ನಗರಕ್ಕೆ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಪ್ರಚಾರ ಮತ್ತು ಜಿಲ್ಲಾ ಕಾಂಗ್ರೆಸ್ ನ ಉನ್ನತ ಮಟ್ಟದ ಸಭೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಬಾಪೂಜಿ ಎಂಬಿಎ ಕಾಲೇಜಿನ ಸಭಾಂಗಣದಲ್ಲಿ ಇಂದು ಮಧ್ಯಾಹ್ನ 12-30 ಕ್ಕೆ ಕರೆಯಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್ ತಿಳಿಸಿದ್ದಾರೆ. 

ಈ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಪ್ರಭಾ  ಮಲ್ಲಿಕಾರ್ಜುನ್, ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಮಯೂರ್ ಜಯಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ಕರ್ನಾಟಕ ಸರ್ಕಾರದ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ಮತ್ತಿತರರು ಭಾಗವಹಿಸುವರು.

error: Content is protected !!