ರಾಜ್ಯಕ್ಕೆ ಅನ್ಯಾಯ : ಕಾಂಗ್ರೆಸ್‌ ಚೊಂಬು ಹಿಡಿದು ನಗರದಲ್ಲಿ ಇಂದು ಪ್ರತಿಭಟನೆ

ಕೇಂದ್ರದಲ್ಲಿನ ಬಿಜೆಪಿ ಸರ್ಕಾರದಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ, ಜಿಲ್ಲಾ ಕಾಂಗ್ರೆಸ್ ವತಿಯಿಂದ ಚೊಂಬು ಹಿಡಿದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 9.30 ಕ್ಕೆ  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ಅಧ್ಯಕ್ಷತೆಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನೆ ಆರಂಭಗೊಂಡು, ಜಯದೇವ ವೃತ್ತ, ಹಳೇ ಪಿ.ಬಿ.ರಸ್ತೆ ಮೂಲಕ ಉಪವಿಭಾಗಾಧಿಕಾರಿಗಳ ಕಛೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.

error: Content is protected !!