ಲೋಕ ಚುನಾವಣೆ : ಅಲೆಮಾರಿ ಬುಡಕಟ್ಟು ಮಹಾಸಭಾದಿಂದ ಕಾಂಗ್ರೆಸ್‌ಗೆ ಬೆಂಬಲ

ದಾವಣಗೆರೆ, ಏ.30- ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಕರ್ನಾಟಕ ರಾಜ್ಯ ಅಲೆಮಾರಿ  ಬುಡಕಟ್ಟು ಮಹಾಸಭಾದ ಜಿಲ್ಲಾ ಘಟಕ ತಿಳಿಸಿದೆ. ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ, ತಳ ಸಮುದಾಯದ ಶ್ರೇಯೋಭಿವೃದ್ಧಿಗೆ ಜನಪರ ಕಾರ್ಯಕ್ರಮ ಗಳನ್ನು ಜಾರಿಗೆ ತರುವುದಾಗಿ ಪ್ರಣಾಳಿಕೆಯಲ್ಲಿ ಹೇಳಿರುವುದು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲೆಮಾರಿ ನಿಗಮ ಸ್ಥಾಪಿಸಿ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿರುವು ದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ತಿಪ್ಪೇಶಪ್ಪ ಹೇಳಿದರು. ಗೌರವಾಧ್ಯಕ್ಷ ಡಿ.ತಿಪ್ಪಣ್ಣ, ಡಾ.ಎಸ್.ವಿ. ಮಂಜಪ್ಪ, ಡಿ.ಕುಮಾರ್, ಹರೀಶ್, ಚಿತ್ರಲಿಂಗಪ್ಪ ಇತರರು ಪತ್ರಿಕಾಗೋಷ್ಠಿಯಲ್ಲಿದ್ದರು.

error: Content is protected !!