ಚಿತ್ರದುರ್ಗ, ಮೇ 6 – ಅಭಿವೃದ್ಧಿ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಗುತ್ತಿಗೆದಾರರೊಬ್ಬರಿಂದ 4 ಲಕ್ಷ ರೂ. ಲಂಚ ಪಡೆಯುವಾಗ ಬಯಲುಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಎಸ್.ವೈ.ಬಸವರಾಜಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಗುತ್ತಿಗೆದಾರ ವೈ.ಪಿ.ಸಿದ್ದನಗೌಡ ಎಂಬುವರು 15 ತುಂಡು ಕಾಮಗಾರಿಗಳ ಟೆಂಡರ್ ಪಡೆದಿದ್ದರು. ಅಗತ್ಯ ಅನುದಾನಕ್ಕೆ ಬಯಲುಸೀಮೆ ಅಭಿವೃದ್ಧಿ ಮಂಡಳಿಯ ಆಡಳಿತಾತ್ಮಕ ಅನುಮೋದನೆ ಪಡೆ ಯಲು ಅವರು ಪ್ರಯತ್ನ ನಡೆಸಿದ್ದರು. ಈ ಸಂಬಂಧ ಬಸವರಾಜಪ್ಪ ಲಂಚ ಪಡೆಯುವಾಗ ಕ್ರಮ ತೆಗೆದುಕೊಳ್ಳಲಾಗಿದೆ.
January 24, 2025