ಪ್ರತಿಷ್ಟಿತ ಖಾಸಗಿ ಶಾಲೆಯಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ,ಮೇ 14- ಪರಿಶಿಷ್ಟ ಜಾತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಖಾಸಗಿ  ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀ ರ್ಣರಾಗಿರಬೇಕು. ವಿದ್ಯಾರ್ಥಿ ಕುಟುಂಬದ ವಾರ್ಷಿಕ ವರಮಾನ ರೂ. 2 ಲಕ್ಷದೊಳಗಿರಬೇಕು. ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ,   ಪೋಟೋ ಹಾಗೂ ಅಂಕಪಟ್ಟಿ, ಗ್ರಾಮೀಣ ಪ್ರಮಾಣ ಪತ್ರಗಳೊಂದಿಗೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿ, ರೂಂ.ನಂ 37. ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿಗೆ ಖುದ್ದು ಹಾಜರಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇದೇ ದಿನಾಂಕ 21 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಅಥವಾ ಆಯಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಲು ಜಂಟಿ ನಿರ್ದೇಶಕ ಕೆ. ನಾಗರಾಜ ತಿಳಿಸಿದ್ದಾರೆ.

error: Content is protected !!