ಹೊನ್ನಾಳಿ, ಮೇ 15 – ತಾಲ್ಲೂಕಿನ ಎಚ್. ಕಡದಕಟ್ಟೆಯ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಶೇ.100 ಫಲಿತಾಂಶ ಬಂದಿದೆ ಎಂದು ಶಾಲೆಯ ಪ್ರಾಂಶುಪಾಲರಾದ ಕೆ.ಎನ್. ಸುಪ್ರಿಯಾ ತಿಳಿಸಿದ್ದಾರೆ.
ಪರೀಕ್ಷೆಗೆ 50 ವಿದ್ಯಾರ್ಥಿನಿಯರು ಹಾಜರಾಗಿದ್ದು, 16 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿ ಪಡೆದಿದ್ದಾರೆ, 27 ವಿದ್ಯಾರ್ಥಿನಿಯರು ಪ್ರಥಮ ದರ್ಜೆ, 6 ವಿದ್ಯಾರ್ಥಿನಿಯರು ದ್ವಿತೀಯ ದರ್ಜೆ ಮತ್ತು ಒಬ್ಬ ವಿದ್ಯಾರ್ಥಿನಿ ಮಾತ್ರವೇ ತೃತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.
8 ವಿದ್ಯಾರ್ಥಿನಿಯರು ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕಗಳಿಸಿದ್ದು, ಇಬ್ಬರು ವಿದ್ಯಾರ್ಥಿನಿಯರು ಹಿಂದಿ ವಿಷಯದಲ್ಲಿ 100ಕ್ಕೆ 100 ಅಂಕ ಗಳಿಸಿದ್ದಕ್ಕಾಗಿ ಸಂತಸ ವ್ಯಕ್ತಪಡಿಸಿದರು.
ಇ. ರಾಜೇಶ್ವರಿ 602 ಅಂಕಗಳಿಂದ 96.32% ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದರೆ, ಎಸ್.ಡಿ. ಸಿಂಚನ 597 ಅಂಕಗಳಿಂದ 95.52% ಪಡೆದು ಶಾಲೆಗೆ ದ್ವಿತೀಯ ಸ್ಥಾನ, ಭೂಮಿಕಾ ಮತ್ತು ಪಿ.ಎಸ್. ಛಾಯಾ 590 ಅಂಕಗಳಿಂದ 94.40% ಪಡೆದು ತೃತೀಯ ಸ್ಥಾನವನ್ನು ಹಂಚಿಕೊಂಡಿದ್ದಾರೆ.