ಪಂಚಮಸಾಲಿ ಸಮಾಜದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ

ದಾವಣಗೆರೆ, ಮೇ 15 – ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾ ಘಟಕದ ವತಿಯಿಂದ 2024ನೇ ಸಾಲಿನಲ್ಲಿ ನಡೆದ ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಜಿಲ್ಲೆಯ ಪಂಚಮಸಾಲಿ ಸಮಾಜದ ಮಕ್ಕಳಿಗೆ `ಸ್ವಾಭಿಮಾನ ಪ್ರತಿಭಾ ಪುರಸ್ಕಾರ’ಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

10ನೇ ತರಗತಿಯಲ್ಲಿ ಶೇ.80ರಷ್ಟು ಮತ್ತು ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳು www.panchamasali.org ನಲ್ಲಿ ಅರ್ಜಿ ಪಡೆದು ಇದೇ ದಿನಾಂಕ 25ರ ಒಳಗಾಗಿ ಸಮಾಜದ ಕಚೇರಿಗೆ ಕಳುಹಿಸಬೇಕು.

ಕಳುಹಿಸಬೇಕಾದ ವಿಳಾಸ: ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ, ಕಛೇರಿ ನಂ:477, 1ನೇ ಮಹಡಿ, 5ನೇ ಮುಖ್ಯ ರಸ್ತೆ, 7ನೇ ಕ್ರಾಸ್, ಚೇತನಾ ಹೋಟೆಲ್ ರಸ್ತೆ, ಪಿ.ಜೆ. ಬಡಾವಣೆ, ದಾವಣಗೆರೆ ಹೆಚ್ಚಿನ ಮಾಹಿತಿಗಾಗಿ ದೂ.ಸಂ 08192-222008 ಸಂಪರ್ಕಿಸಬಹುದು.

error: Content is protected !!